ಶ್ರೀನಗರ, ಏ 29 (DaijiworldNews/DB): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್ನ ಗಡಿ ನಿಯಂತ್ರಣ ರೇಖೆ ಬಳಿ ಶುಕ್ರವಾರ ಸಂಭವಿಸಿದ ಗಣಿ ಸ್ಫೋಟದಲ್ಲಿ ಭಾರತೀಯ ಸೇನೆಯ ಮೂವರು ಸಿಬಂದಿ ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಗಾಯಾಳು ಸಿಬಂದಿಯನ್ನು ತತ್ಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ. ಉಳಿದ ಎಲ್ಲಾ ಸಿಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ಜಮ್ಮುವಿನ ಸಾರ್ವಜನಿಕ ಸಂಪರ್ಕ ಅಧಿಕಾರಿ (ರಕ್ಷಣಾ) ತಿಳಿಸಿದ್ದಾರೆ.
ಸೇನಾ ಸಿಬಂದಿ ಎಂದಿನಂತೆ ಗಡಿ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಸ್ಪೋಟ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ವರದಿಗಳು ತಿಳಿಸಿವೆ.
ಸಾಂದರ್ಭಿಕ ಚಿತ್ರ