ಬೆಂಗಳೂರು, ಏ 30 (DaijiworldNews/HR): ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಮೇ 7 ರಂದು ಆರಂಭಿಸಲಾಗುತ್ತಿದ್ದು, ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ವಿಕಾಸಸೌಧದಲ್ಲಿ ಸಂಚಾರಿ ಪಶು ಅಂಬುಲೆನ್ಸ್ ಅನ್ನು ಪರೀಕ್ಷಿಸಿದ ಬಳಿಕ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಈ ಕುರಿತು ಮಾಹಿತಿ ನೀಡಿದ್ದು, ಮೇ 7ರಂದು ಕೇಂದ್ರ ಪಶುಸಂಗೋಪನಾ ಸಚಿವ ಪುರುಷೋತ್ತಮ ರೂಪಾಲ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಂಬುಲೆನ್ಸ್ ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಒಟ್ಟು 275 ಪಶು ಅಂಬುಲೆನ್ಸ್ ಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದ್ದು, ಈ ಪೈಕಿ ಮೇ 7ರಂದು 70 ಅಂಬುಲೆನ್ಸ್ ಗಳನ್ನು ಜಾನುವಾರಗಳ ಸೇವೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.