ಬೆಂಗಳೂರು, ಏ 30 (DaijiworldNews/MS): ಬಜರಂಗದಳದ ಕಾರ್ಯಕರ್ತರು ಪ್ರಚಾರಕ್ಕಾಗಿ ಅಮಾಯಕರನ್ನು ಗುರಿಯಾಗಿಸಿಕೊಂಡು ರಣಹದ್ದುಗಳಂತೆ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಸಾಕಿದ ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ , " ಬಜರಂಗದಳದ ಕಾರ್ಯಕರ್ತರು ಮಹಿಳೆಯ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಿದ ಸುದ್ದಿ ಕೇಳಿ ಬೇಸರ ಉಂಟಾಗಿದೆ. ಬಜರಂಗದಳದವರು ಪ್ರಚಾರಕ್ಕಾಗಿ ಅಮಾಯಕರನ್ನು ಗುರಿಯಾಗಿಸಿಕೊಂಡು ರಣಹದ್ದುಗಳಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಜರಂಗದಳ ಕಾರ್ಯಕರ್ತರು ತಾವು ಹಿಂದೂ ಸಂಸ್ಕೃತಿಯ ರಕ್ಷಕರೆಂದು ಹೇಳಿಕೊಳ್ಳುತ್ತಾರೆ. ಅವರ ಯಾವ ಧಾರ್ಮಿಕ ಗ್ರಂಥಗಳು ಮಹಿಳೆಯ ಮಂಗಳಸೂತ್ರ ಮತ್ತು ಸೀರೆ ಎಳೆಯಲು ಹೇಳಿದೆ ?ಅಥವಾ ಇದು ನಾಗ್ಪುರ ಮೂಲದ ಅವರ ಪೂರ್ವಜರು ಕಲಿಸಿದ ಪಾಠವೇ? ಎಂದು ಪ್ರಶ್ನಿಸಿದ್ದಾರೆ.
ಬಜರಂಗದಳಕ್ಕೆ ಸೇರಿದ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.ಕರ್ನಾಟಕದ ಪೊಲೀಸ್ ಇಲಾಖೆಯು ಜನಸಾಮಾನ್ಯರಿಗಾಗಿ ಕೆಲಸ ಮಾಡುತ್ತಿದೆಯೇ ಅಥವಾ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಗೂಂಡಾಗಳಿಗಾಗಿ ಕೆಲಸ ಮಾಡುತ್ತಿದೆಯೇ?ಬಿಜೆಪಿ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅಸ್ತಿತ್ವದಲ್ಲಿಲ್ಲ.ಕರ್ನಾಟಕದ ಹಿತದೃಷ್ಟಿಯಿಂದ ಗೃಹಸಚಿವರಾದ ಜ್ಞಾನೇಂದ್ರ ಅರಾಗ ಅವರು ರಾಜೀನಾಮೆಗೆ ನೀಡಬೇಕು.
ಬಿಜೆಪಿಯು ನಕಲಿ ಚೌಕಿದಾರರಿಂದ ತುಂಬಿದ್ದು, ಕರ್ನಾಟಕವು ಉತ್ತರ ಪ್ರದೇಶದಂತೆ ಆಗುವುದನ್ನು ತಪ್ಪಿಸಲು ಬದಲಾವಣೆಯ ಅಗತ್ಯವಿದೆ ಎಂದು ಹೇಳಿದ್ದಾರೆ.