ಔರಂಗಾಬಾದ್, ಮೇ 01 (DaijiworldNews/DB): ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಅನಗತ್ಯ ಎಂದು ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಕಾನೂನು ಆಯೋಗವೇ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯವಿಲ್ಲ ಎಂದು ಹೇಳಿದೆ ಎಂದರು.
ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಇದನ್ನು ಅನುಷ್ಠಾನಿಸುವಂತೆ ಕರೆ ಕೊಟ್ಟಿದ್ದಾರೆ. ದೇಶದಲ್ಲಿ ಈ ಸಂಹಿತೆ ಅನಗತ್ಯ ಎಂದವರು ತಿಳಿಸಿದರು.