ಶಾಹಜಹಾನ್ಪುರ, ಮೇ 01 (DaijiworldNews/DB): ಉತ್ತರಪ್ರದೇಶದಲ್ಲಿ 30 ವರ್ಷದ ಯುವತಿ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆ ಎಸಗಿದ್ದಲ್ಲದೆ ವೀಡಿಯೋ ಮಾಡಿ ವೈರಲ್ ಮಾಡಿರುವ ಹೇಯ ಕೃತ್ಯ ನಡೆದಿದೆ.
ಮದನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ನಿವಾಸಿಯಾಗಿರುವ ಮಹಿಳೆ ಮೇಲೆ ಐವರು ಕಾಮುಕರು ಏ. 22 ರಂದು ಅತ್ಯಾಚಾರ ಎಸಗಿದ್ದಾರೆ. ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅಲ್ಲದೆ, ಇದರ ವೀಡಿಯೋ ಚಿತ್ರೀಕರಿಸಿಕೊಂಡು ಘಟನೆ ನಡೆದ ಒಂದು ವಾರದ ಬಳಿಕ ಸಾಮಾಜಿಕ ತಾಣಗಳಲ್ಲಿ ಬಿಟ್ಟಿದ್ದಾರೆ ಎಂದು ಯುವತಿ ದೂರು ನೀಡಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಶನಿವಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ (ನಗರ) ಸಂಜಯ್ ಕುಮಾರ್ ತಿಳಿಸಿದ್ದಾರೆ.
ಸದ್ಯ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.