ನವದೆಹಲಿ, ಮೇ 01 (DaijiworldNews/HR): ಪ್ಯಾರಿಸ್, ಬರ್ಲಿನ್, ಕೋಪನ್ ಹೇಗನ್ ಪ್ರವಾಸಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರದೇಶವು ಅನೇಕ ಸವಾಲುಗಳು ಮತ್ತು ಆಯ್ಕೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಯುರೋಪ್ ಪ್ರವಾಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮಗಳ ಮೂಲಕ, ಭಾರತದ ಅನ್ವೇಷಣೆಯಲ್ಲಿ ಪ್ರಮುಖ ಸಹಚರರಾಗಿರುವ ತಮ್ಮ ಯುರೋಪಿಯನ್ ಪಾಲುದಾರರೊಂದಿಗೆ ಶಾಂತಿ ಮತ್ತು ಸಮೃದ್ಧಿಗಾಗಿ ಸಹಕಾರದ ಮನೋಭಾವವನ್ನು ಬಲಪಡಿಸಲು ಉದ್ದೇಶಿಸಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಮೇ 2 ರಂದು ಜರ್ಮನಿಯ ಬರ್ಲಿನ್ಗೆ ಭೇಟಿ ನೀಡಲಿದ್ದು, ನಂತರ ಅವರು ಮೇ 3 ರಿಂದ 4 ಡೆನ್ಮಾರ್ಕ್ನ ಕೋಪನ್ಹೇಗನ್ಗೆ ಪ್ರಯಾಣಿಸಲಿದ್ದಾರೆ. ಭಾರತಕ್ಕೆ ಹಿಂತಿರುಗುವ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ.
ಯುರೋಪ್ ಖಂಡ ಭಾರತೀಯ ಮೂಲದ ಒಂದು ಮಿಲಿಯನ್ಗಿಂತಲೂ ಹೆಚ್ಚು ಜನರಿಗೆ ನೆಲೆಯಾಗಿದೆ ಮತ್ತು ಜರ್ಮನಿಯು ಈ ಸಂಖ್ಯೆಯಲ್ಲಿ ಗಮನಾರ್ಹ ಪ್ರಮಾಣವನ್ನು ಹೊಂದಿದ್ದು, ಯುರೋಪ್ನೊಂದಿಗಿನ ನಮ್ಮ ಸಂಬಂಧಗಳಲ್ಲಿ ಪ್ರಮುಖ ಆಧಾರವಾಗಿದೆ ಮತ್ತು ಆದ್ದರಿಂದ ನಾನು ನನ್ನ ಭೇಟಿಯ ಅವಕಾಶವನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.