ಬೆಂಗಳೂರು, ಮೇ 02 (DaijiworldNews/DB): ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಕಲಬುರ್ಗಿ ಜ್ಞಾನಜ್ಯೋತಿ ಶಾಲೆಯ ಪ್ರಿನ್ಸಿಪಾಲ್ ಕಾಶಿನಾಥ್ ಸಿಐಡಿ ಪೊಲೀಸರು ಮುಂದೆ ಶರಣಾಗಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಿಂಗ್ ಪಿನ್ಗಳಾ ಮಹಾಂತೇಶ್ ಪಾಟೀಲ್, ರುದ್ರಗೌಡ ಪಾಟೀಲ್ ಹಾಗೂ ದಿವ್ಯಾ ಹಾಗರಗಿ ಬಂಧನಕ್ಕೊಳಗಾಗಿದ್ದಾರೆ.
ಇದೀಗ ಅಕ್ರಮದಲ್ಲಿ ಭಾಗಿಯಾಗಿದ್ದ ಶಾಲೆಯ ಪ್ರಾಂಶುಪಾಲ ಕಾಶಿನಾಥ್ ಕೂಡ ಸಿಐಡಿ ಅಧಿಕಾರಿಗಳ ವಶವಾಗಿದ್ದು, ಬಂಧಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.