ನವದೆಹಲಿ, ಮೇ 02 (DaijiworldNews/MS): ಸೋಮವಾರದಿಂದ ಮೂರು ದಿನಗಳ ಕಾಲ ಯುರೋಪ್ನ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಜರ್ಮನಿಗೆ ಬಂದಿಳಿದ್ದಾರೆ.
ಇಂದು ಪ್ರಧಾನಿ ಮೋದಿ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರನ್ನು ಬರ್ಲಿನ್ನಲ್ಲಿ ಭೇಟಿಯಾಗಲಿದ್ದಾರೆ. ಡೆನ್ಮಾರ್ಕ್ನ ಕೋಪನ್ಹೇಗನ್ನಲ್ಲಿ ಮೇ 3–4 ರಂದು ನಡೆಯುವ ದ್ವಿಪಕ್ಷೀಯ ಮಾತುಕತೆಯಲ್ಲಿ ಹಾಗೂ ಭಾರತ-ನಾರ್ಡಿಕ್ ಎರಡನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಜರ್ಮನಿಯಲ್ಲಿ ಅವರು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಜನರ ಜತೆಗೆ ಸಂವಾದ ನಡೆಸಲಿದ್ದಾರೆ.
ಪ್ರಧಾನಿ ಮೋದಿ ಅವರು ಇಲ್ಲಿಂದ ಡೆನ್ಮಾರ್ಕ್ ಪ್ರಧಾನಿ ಮೆಟ್ ಫ್ರೆಡರಿಕ್ಸೆನ್ ಅವರ ಆಹ್ವಾನದ ಮೇರೆಗೆ ಕೋಪನ್ಹೇಗನ್ಗೆ ತೆರಳಲಿದ್ದಾರೆ. ಅವರು ಡೆನ್ಮಾರ್ಕ್ ಆತಿಥ್ಯದಲ್ಲಿ ಎರಡನೇ ಭಾರತ- ನೋರ್ಡಿಕ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಯುರೋಪಿಯನ್ ಪಾಲುದಾರರೊಂದಿಗೆ ಸಹಕಾರವನ್ನು ಬಲಪಡಿಸುವ ಉದ್ದೇಶವನ್ನು ಪ್ರಸ್ತುತ ಭೇಟಿ ಹೊಂದಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಆರಂಭಕ್ಕೂ ಮುನ್ನ ಹೇಳಿದ್ದರು.