ಸೊಪೋರ್, ಮೇ 03(DaijiworldNews/MS): ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ಹೈಗಾಮ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಬಂಧಿಸಿದ್ದಾರೆ.
ಇತ್ತೀಚಿಗೆ ಸ್ಥಳೀಯರಲ್ಲದ ಕಾರ್ಮಿಕರ ಹತ್ಯೆಗಳು ಮತ್ತು ವಿವಿಧೆಡೆ ನಡೆದ ಗ್ರೆನೇಡ್ ದಾಳಿಗಳ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಇದರಂತೆ ವಿವಿಧ ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಶಂಕಿತರನ್ನು ವಶಕ್ಕೆ ಪಡೇದು ವಿಚಾರಣೆ ನಡೆಸಿದ ಬಳಿಕ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರನ್ನು ಉಸ್ಮಾನ್-ಬಾದ್ ವಾರ್ಪೋರಾದ ತಫ್ಹೀಮ್ ರೆಯಾಜ್, ಬ್ರತ್ ಕಲಾನ್ ಸೋಪೋರ್ನ ಸೀರತ್ ಶಾಬಾಜ್ ಮಿರ್ ಮತ್ತು ಮಿರ್ಪೋರಾ ಬ್ರತ್ಕಲನ್ನ ರಮೀಜ್ ಅಹ್ಮದ್ ಖಾನ್ ಎಂದು ಗುರುತಿಸಲಾಗಿದೆ.
ಸತತ ವಿಚಾರಣೆಯ ನಂತರ ಈ ಮೂವರು ಉಗ್ರರು ಲಷ್ಕರ್-ಎ-ತೊಯ್ಬಾದ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ. ಬಂಧಿತರಿಂದ ಮೂರು ಚೀನಾ ನಿರ್ಮಿತ ಪಿಸ್ತೂಲ್ಗಳು, ಮದ್ದುಗುಂಡುಗಳು ಹಾಗೂ ಇತರ ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.