ಬೆಂಗಳೂರು, ಮೇ 03 (DaijiworldNews/HR): ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇವೆಲ್ಲವೂ ಸುಳ್ಳು ಸುದ್ದಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಿಎಂ ಬದಲಾವಣೆ ಕೇವಲ ಸುಳ್ಳು ಸುದ್ದಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ನಾಯಕತ್ವ, ಮಾರ್ಗದರ್ಶನದಲ್ಲಿ ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.
ಇನ್ನು ಬೊಮ್ಮಾಯಿ ಕಾಮನ್ ಮ್ಯಾನ್. ಉತ್ತಮ ಆಡಳಿತ ಜನರ ಬಯಕೆ ಕೂಡ ಆಗಿದೆ. ಈ ನಿಟ್ಟಿನಲ್ಲಿ ಸಿಎಂ ಉತ್ತಮ ಆಡಳಿತ ನೀಡುತ್ತಿದ್ದಾರೆ. ಹೀಗಾಗಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆ ಚರ್ಚೆಗೆ ತೆರೆ ಎಳೆದಿದ್ದಾರೆ.