ಬೆಂಗಳೂರು, ಮೇ 03 (DaijiworldNews/HR): ಕರ್ನಾಟಕದಲ್ಲಿನ ಸಚಿವ ಸಂಪುಟ ವಿಸ್ತರಣೆ ಕುರಿತು 2-3 ದಿನಗಳಲ್ಲಿ ಸ್ಪಷ್ಟ ನಿರ್ಧಾರ ತಿಳಿಸುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯ ನಾಯಕತ್ವ ಬದಲಾವಣೆ ಆಗುತ್ತದೆ ಎನ್ನುವುದೆಲ್ಲ ಊಹಾಪೋಹ. ಅದ್ಯಾವುದು ಚರ್ಚೆಯಾಗಿಲ್ಲ. ಆದರೆ 2-3 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದರು.
ಅಮಿತ್ ಷಾ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ಮಾಡಿಕೊಂಡು ರಾಜ್ಯಕ್ಕೆ ಬಂದಂತಿದ್ದು, ದೆಹಲಿಗೆ ಮರಳಿದ ಬಳಿಕ 2-3 ದಿನಗಳಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ತಿಳಿಸುವ ಸಾಧ್ಯತೆಗಳಿವೆ ಎಂದಿದ್ದಾರೆ.