ಶಿವಮೊಗ್ಗ, ಮೇ 03 (DaijiworldNews/HR): ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗ್ತಿದ್ದು, ಈ ನಡುವೆ ಮಂಗನ ಕಾಯಿಲೆಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಗರ ತಾಲೂಕಿನ ಅರಳಗೋಡು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ರಾಮಸ್ವಾಮಿ ಕರುಮನೆ ಅವರಿಗೆ ಏಪ್ರಿಲ್ 24ರಂದು ಜ್ವರ ಕಾಣಿಸಿಕೊಂಡು ಆಸ್ಪತ್ರಗೆ ದಾಖಲಾಗಿದ್ದರು. ಬಳಿಕ ಇದು ಮಂಗನ ಕಾಯಿಲೆ ಎಂದು ದೃಢವಾಗಿದ್ದು, ಇಂದು ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.
ಇನ್ನು ಕಳೆದ ತಿಂಗಳು ಈ ಮಂಗನ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 85 ವರ್ಷದ ವೃದ್ಧೆ ಜಾನಕಿ ಹೆಗಡೆ ಬಲಿಯಾಗಿದ್ದು, ರಾಜ್ಯದಲ್ಲಿ ಇದು ಎರಡನೇ ಬಲಿಯಾಗಿದೆ.