ಗಾಂಧಿನಗರ, ಮೇ 03 (DaijiworldNews/DB): ಕಾಂಗ್ರೆಸ್ ಪಕ್ಷರ ಕಾರ್ಯನಿರ್ವಹಣೆ ಕುರಿತು ಅಸಮಾಧಾನಗೊಂಡು ಗುಜರಾತ್ ಕಾಂಗ್ರೆಸ್ ಶಾಸಕರೊಬ್ಬರು ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಖೇದ್ಬ್ರಹ್ಮ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ ಅವರು, ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಗುಜರಾತ್ನ ಖೇದ್ಬ್ರಹ್ಮ ಕ್ಷೇತ್ರದ ಶಾಸಕ ಅಶ್ವಿನ್ ಕೊತ್ವಾಲ್ ಅವರೇ ಬಿಜೆಪಿ ಸೇರಿದ ಶಾಸಕ. ಕಾಂಗ್ರೆಸ್ನಲ್ಲಿ ಅನ್ಯಾಯವಾಗುತ್ತಿದೆ. ಅದಕ್ಕಾಗಿ ಈ ನಿರ್ಧಾರ ತೆಗೆದುಕೊಂಡೆ ಎಂದವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಜನಸಾಮಾನ್ಯರಲ್ಲಿ ಜನಪ್ರಿಯರಾಗಿರುವವರಿಗೆ ಟಿಕೆಟ್ ನೀಡುವ ಬದಲು, ಪಕ್ಷದ ಮುಖಂಡರಿಗೆ ನಿಷ್ಠರಾಗಿರುವವರಿಗೆ ಮಾತ್ರ ಟಿಕೆಟ್ ನೀಡುತ್ತಿದೆ. ಕಾಂಗ್ರೆಸ್ನಲ್ಲಿ ಅನ್ಯಾಯವೇ ಹೆಚ್ಚುತ್ತಿದೆ. ನನಗೂ ಭವಿಷ್ಯದಲ್ಲಿ ಟಿಕೆಟ್ ಕೈ ತಪ್ಪುವ ಸಾಧ್ಯತೆಯನ್ನು ಮನಗಂಡು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುಜರಾತ್ನಲ್ಲಿ ಸಮಗ್ರ ಅಭಿವೃದ್ದಿ ನಡೆಯುತ್ತಿದೆ. ಬುಡಕಟ್ಟು ಪ್ರದೇಶಗಳಲ್ಲಿ ಉನ್ನತಿ ಕಂಡಿವೆ ಎಂದವರು ತಿಳಿಸಿದರು.