ಮುಂಬೈ, ಮೇ 03 (DaijiworldNews/SM): ಮಸೀದಿಗಳ ಧ್ವನಿವರ್ಧಕಗಳ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಾ ಬಂದಿರುವ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಗೆ ಇದೀಗ ಪ್ರಕರಣವೊಂದರಲ್ಲಿ ಸಂಕಷ್ಟ ತಂದೊಡ್ಡಿದೆ.
14 ವರ್ಷಗಳ ಹಿಂದಿನ ಪ್ರಕರಣವೊಂದರ ಸಂಬಂಧ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ನ್ಯಾಯಾಲಯವೊಂದು ರಾಜ್ ಠಾಕ್ರೆ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಮಸೀದಿಗಳಲ್ಲಿನ ಧ್ವನಿವರ್ಧಕ ತೆಗೆಯುವಂತೆ ಪ್ರಚೋದನೆ ನೀಡಿದ ರಾಜ್ ಠಾಕ್ರೆ ವಿರುದ್ಧ ಕೇಸ್ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ 2008ರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು.