ಬೆಂಗಳೂರು, ಮೇ 04 (DaijiworldNews/HR): ದೆಹಲಿಗೆ ತೆರಳಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಲ್ಲಿ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, 4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವುದು ಕೇವಲ ಮಾಧ್ಯಮಗಳಿಂದ ಬಂದ ವಿಚಾರ ಅಷ್ಟೇ. ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದರು.
ಇನ್ನು ಮುಂದಿನ ವಾರ ಡಿಸಿ ಮತ್ತು ಸಿಇಓ ಗಳ ಜೊತೆ ಸಭೆ ನಡೆಸುತ್ತೇನೆ. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ, ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.