ಮುಂಬೈ, ಮೇ 04 (DaijiworldNews/HR): ಮಹಾರಾಷ್ಟ್ರದಲ್ಲಿ ಶಾಂತಿ ನೆಲೆಸಿದ್ದು, ಯಾವುದೇ ಪ್ರತಿಭಟನೆ ನಡೆಯುತ್ತಿಲ್ಲ. ರಾಜ್ಯದಲ್ಲಿ ಅಕ್ರಮ ಧ್ವನಿವರ್ಧಕಗಳನ್ನು ಅಳವಡಿಸಿಲ್ಲ. ಬಾಳಾ ಸಾಹೇಬ್ ಠಾಕ್ರೆ ಹಾಗೂ ವೀರ ಸಾವರ್ಕರ್ ಅವರು ದೇಶಕ್ಕೆ ಹಿಂದುತ್ವದ ಪಾಠ ಮಾಡಿದ್ದು, ಶಿವಸೇನೆಯು ಹಿಂದುತ್ವದ ಮೂಲ ಶಾಲೆಯಾಗಿದೆ ಎಂದು ಶಿವಸೇನಾ ನಾಯಕ ರಾವುತ್ ಪ್ರತಿಪಾದಿಸಿದ್ದಾರೆ.
ಮಸೀದಿಗಳ ಮೇಲಿರುವ ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಬೆಳವಣಿಗಳ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ಅಕ್ರಮ ಧ್ವನಿವರ್ಧಕಗಳನ್ನು ಅಳವಡಿಸಿಲ್ಲ. ಮಹಾರಾಷ್ಟ್ರದಲ್ಲಿ ಶಾಂತಿ ನೆಲೆಸಿದ್ದು, ಯಾವುದೇ ಪ್ರತಿಭಟನೆ ನಡೆಯುತ್ತಿಲ್ಲ ಎಂದಿದ್ದಾರೆ.
ಇನ್ನು ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆಗೆಯುವಂತೆ ಆಗ್ರಹಿಸಿದ್ದ ರಾಜ್ ಠಾಕ್ರೆ, ಮೇ 3 ಕೊನೆಯ ದಿನವೆಂದು ಸಾರಿದ್ದರು. ಅದು ಸಾಧ್ಯವಾಗದಿದ್ದರೆ, ಮಸೀದಿಗಳ ಎದುರು ಹನುಮಾನ್ ಚಾಲೀಸಾ ಪಠಣ ಆರಂಭಿಸುವುದಾಗಿ ಘೋಷಿಸಿದ್ದರು.