ಬೆಂಗಳೂರು, ಮೇ 04 (DaijiworldNews/HR): ಯಾವುದೇ ಅಕ್ರಮ, ಭ್ರಷ್ಟಾಚಾರದಲ್ಲಿ ನಾನು ಭಾಗಿಯಾಗಿಲ್ಲ. ನಾನು ಕಳಂಕರಹಿತ ರಾಜಕಾರಣಿ. ನನ್ನ ವಿರುದ್ಧದ ಕಾಂಗ್ರೆಸ್ ಆರೋಪ ಸುಳ್ಳು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಜೈಲಿಗೆ ಹೋಗಿ ಬಂದ ವ್ಯಕ್ತಿ ನನ್ನ ವಿರುದ್ಧ ನಿರಾಧಾರ ಆರೋಪ ಮಾಡುತ್ತಿದ್ದಾರೆ. ನನ್ನ ಬಗ್ಗೆ ಆರೋಪ ಮಾಡಲು ಡಿಕೆಶಿಗೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷ ಎಲ್ಲೆಡೆ ಸೋತು ಸುಣ್ಣವಾಗಿದ್ದು, ಚುನಾವಣೆ ಸಮೀಪಿಸುತ್ತಿದ್ದಂತೆ ಭಯದಿಂದ ನಮ್ಮ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ. ದಾಖಲೆ ಸಮೇತ ಆರೋಪ ಮಾಡಿದರೆ ಅರ್ಥವಿದೆ ಎಂದರು.