ರಾಮನಗರ, ಮೇ 04 (DaijiworldNews/SM): ಪಿಎಸ್ಐ ನೇಮಕಾತಿ ಹಗರಣದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಭ್ರಷ್ಟಾಚಾರಿಯಾಗಿರುವ ಸಚಿವ ಅಶ್ವಥ್ ನಾರಾಯಣ ಎಂದು ವಾಗ್ದಾಳಿ ನಡೆಸಿದ್ದಾರೆ. ಅವರು ಅತ್ಯಂತ ಭ್ರಷ್ಟ ರಾಜಕಾರಣಿ ಎಂದು ಆರೋಪಿಸಿರುವ ಶಿವಕುಮಾರ್, ಸಂಸ್ಕೃತಿ ಇರುವವರು ಇಂತಹ ಕೆಲಸಗಳನ್ನು ಮಾಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಅವರೇ ಅಶ್ವಥ್ ನಾರಾಯಣ್ ವಿರುದ್ಧ ಕುತಂತ್ರ ಮಾಡಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಯನ್ನು ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದು, ಇರಬಹುದು ನಾನು ಇಲ್ಲ ಅಂತ ಹೇಳಲ್ಲ ಎಂದಿದ್ದಾರೆ.