ಬೆಂಗಳೂರು, ಮೇ 05 (DaijiworldNews/HR): 545 ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿಯು ಕೆಪಿಸಿಸಿ ವಕ್ತಾರ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಮೂರನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ.
ಡಿವೈಎಸ್ಪಿ ನರಸಿಂಹಮೂರ್ತಿ ಅವರು ಈ ಆದೇಶ ನೀಡಿದ್ದು, ಈ ನೋಟಿಸ್ ಸ್ವೀಕರಿಸಿದ ಎರಡು ದಿನದೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗಿ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕುರಿತು ಹೇಳಿಕೆ ದಾಖಲಿಸುವಂತೆ ಸೂಚಿಸಿದ್ದಾರೆ.
ಇನ್ನು ಈ ಹಿಂದೆ ಎರಡು ಬಾರಿ ಸಿಐಡಿ ಪ್ರಿಯಾಂಕ್ ಖರ್ಗೆಯವರಿಗೆ ನೋಟಿಸ್ ಜಾರಿಗೊಳಿಸಿದ್ದು, ನೋಟಿಸ್ ಸ್ವೀಕರಿಸಿದ್ದರೂ ವಿಚಾರಣೆಗೆ ಹಾಜರಾಗಲು ಖರ್ಗೆ ನಿರಾಕರಿಸಿದ್ದರು. ಇದೀಗ ಮತ್ತೆ ಸಿಐಡಿ ನೋಟಿಸ್ ನೀಡಿದೆ.
ಪ್ರಿಯಾಂಕ ಖರ್ಗೆ ಅವರು ತಮ್ಮ ಬಳಿ 545 ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ಸಾಕ್ಷಿಗಳಿವೆ ಎಂದು ಹೇಳಿದ್ದರುಜೊತೆಗೆ ಇಬ್ಬರು ಆರೋಪಿಗಳ ನಡುವೆ ಪಿಎಸ್ಐ ಹುದ್ದೆ ಪಡೆಯುವ ಸಂಬಂಧ ನಡೆಸಿದ್ದರು ಎನ್ನಲಾದ 'ಡೀಲ್' ಮಾತುಕತೆಯ ಆಡಿಯೋವನ್ನು ಬಿಡುಗಡೆಗೊಳಿಸಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಸಿಐಡಿ ತಿಳಿಸಿದೆ.