ನವದೆಹಲಿ, ಮೇ 05 (DaijiworldNews/HR): 12 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಕೊವ್ಯಾಕ್ಸ್ ಈಗ ದೇಶದ ಸುಲಭವಾಗಿ ಲಭ್ಯವಾಗಲಿದೆ ಎಂದು ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆಡರ್ ಪೂನಾವಾಲಾ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊವ್ಯಾಕ್ಸ್ ವಯಸ್ಕರಿಗೆ ಲಭ್ಯವಿದೆಯೇ ಎಂದು ನಮ್ಮಲ್ಲಿ ಕೇಳಿದ್ದು, ಕೊವೊವ್ಯಾಕ್ಸ್ 12 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಇನ್ನು ಕೊವ್ಯಾಕ್ಸ್ ಭಾರತದಲ್ಲಿ ತಯಾರಿಸಲಾದ ಲಸಿಕೆಯಾಗಿದ್ದು, ಯುರೋಪ್ನಲ್ಲಿ ಮಾರಾಟ ಮಾಡಲಾಗುತ್ತದೆ. ಇದು 90 ಪ್ರತಿಶತದಷ್ಟು ಪರಿಣಾಮಕಾರಿಯಾಗಿದೆ. ಇದು ನಮ್ಮ ಮಕ್ಕಳನ್ನು ರಕ್ಷಿಸಲು ಮತ್ತೊಂದು ಲಸಿಕೆಯನ್ನು ಒದಗಿಸುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಗೆ ಅನುಗುಣವಾಗಿದೆ ಎಂದು ಮಾಹಿತಿ ನೀಡಿದ್ದಾರೆ.