ರಾಜಸ್ಥಾನ, ಮೇ 05 (DaijiworldNews/HR): ಬುಧವಾರ ತಡರಾತ್ರಿ ಆಹಾರ ಸೇವಿಸುತ್ತಿದ್ದ ಇಬ್ಬರು ಯುವಕರ ಮೇಲೆ ಭಿಲ್ವಾರದ ಸಂಗೆನೆರ್ ಪಟ್ಟಣದಲ್ಲಿ ನಡೆದ ದಾಳಿಯು ಉದ್ವಿಗ್ನತೆಯನ್ನು ಉಂಟುಮಾಡಿದ್ದು, ಭಿಲ್ವಾರಾ ನಗರದಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಗಾಯಾಳುಗಳಿಬ್ಬರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯುವಕರ ಬೈಕ್ಗೂ ಬೆಂಕಿ ಹಚ್ಚಲಾಗಿದ್ದು, ದಾಳಿಕೋರರು ಮತ್ತು ದಾಳಿಯ ಹಿಂದಿನ ಉದ್ದೇಶಕ್ಕಾಗಿ ತನಿಖೆ ನಡೆಯುತ್ತಿದೆ.
ಈ ಕುರಿತು ಭಿಲ್ವಾರದ ಜಿಲ್ಲಾಧಿಕಾರಿ ಆಶಿಶ್ ಮೋದಿ ಮಾಹಿತಿ ನೀಡಿದ್ದು, 'ನಾವು ತನಿಖೆ ಮಾಡುತ್ತಿದ್ದೇವೆ. ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸುತ್ತಿದ್ದೇವೆ. ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮತ್ತೊಬ್ಬರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದೆ. ಶಾಂತಿ ಕಾಪಾಡುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ ಎಂದರು.
ಇನ್ನು ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ವಿಶೇಷ ಪೊಲೀಸ್ ಪಡೆ ಸಿಬ್ಬಂದಿ ಬೀದಿಗಳಲ್ಲಿ ಗಸ್ತು ತಿರುಗುತ್ತಿದ್ದಾರೆ.