ರಾಯಚೂರು, ಮೇ 05(DaijiworldNews/MS):ರಾಯಚೂರು ತಾಲೂಕಿನ ಮರ್ಚೆಡ್ ಗ್ರಾಮದ ಕೆರೆಯೊಂದರಲ್ಲಿ ಗುರುವಾರ ಬೆಳಗ್ಗೆ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯದ ಘಟನೆ ಬೆಳಕಿಗೆ ಬಂದಿದೆ.
ಬೆಳಗ್ಗಿನ ಜಾವ ಗ್ರಾಮಸ್ಥರು ಬಹಿರ್ದೆಸೆಗೆ ಹೋದಾಗ ಮಗುವಿನ ಶವ ನೀರಿನಲ್ಲಿ ತೇಲಿರುವುದು ಕಂಡು ಬಂದಿದೆ. ಕನಿಷ್ಟ ಎರಡು ದಿನಗಳ ಹಿಂದೆ ನವಜಾತ ಶಿಶುವನ್ನು ಕೆರೆಗೆ ಎಸೆದಿರಬಹುದು ಎಂದು ಶಂಕಿಸಲಾಗಿದೆ.
ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೇರೆ ಗ್ರಾಮದವರು ಬಂದು ಎಸೆದಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮೀಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.