ಮುಂಬೈ, ಮೇ 05(DaijiworldNews/MS): ಧ್ವನಿವರ್ಧಕ ವಿವಾದ ನಡುವೆ, ಮಹಾರಾಷ್ಟ್ರದಲ್ಲಿ 1,500 ಕ್ಕೂ ಹೆಚ್ಚು ಮಸೀದಿಗಳು ಮತ್ತು 1,300 ದೇವಾಲಯಗಳಿಗೆ ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.
ಇದಲ್ಲದೆ ರಾಜ್ಯಾದ್ಯಂತ 2300 ಜನರ ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸರು 7000 ಜನರ ವಿರುದ್ಧ ಸಿಆರ್ಪಿಸಿ ಸೆಕ್ಷನ್ 149 ನೋಟಿಸ್ಗಳನ್ನು ಸಹ ಜಾರಿ ಮಾಡಿದ್ದಾರೆ ಮಾಡಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಈ ಮಧ್ಯೆ "ಕೋಮು ಉದ್ವಿಗ್ನತೆ" ಸೃಷ್ಟಿಸಿದ್ದಕ್ಕಾಗಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಒಟ್ಟು 150 ಮಹಾರಾಷ್ಟ್ರ ನವನಿರ್ಮಾಣ ಸೇನಾ ಪಕ್ಷದ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾಸಿಕ್ ಜಿಲ್ಲೆಯಲ್ಲಿ ಕೋಮು ಉದ್ನಿಗ್ನತೆ ಸೃಷ್ಟಿಸಿದ್ದ ಆರೋಪದಡಿ ಮಹಾರಾಷ್ಟ್ರ ನವನಿರ್ಮಾಣ ಸೇನಾ ಪಕ್ಷದ 150 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆರವುಗೊಳಿಸಲು ಎಂಎನ್ ಎಸ್ ವರಿಷ್ಠ ರಾಜ್ ಠಾಕ್ರೆ ಮಹಾರಾಷ್ಟ್ರ ಸರ್ಕಾರಕ್ಕೆ ಮೇ 3ರವರೆಗೆ ಅಂತಿಮ ಗಡುವು ನೀಡಿದ್ದರು.
ಮೇ 4ರಂದು ಮಸೀದಿಗಳಲ್ಲಿ ಆಜಾನ್ ಕೂಗಿದಾಗ ಲೌಡ್ ಸ್ಪೀಕರ್ ಬಳಸಿ ಹನುಮಾನ್ ಚಾಲೀಸಾ ಪ್ರಸಾರ ಮಾಡಿ ಎಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಕಾರ್ಯಕರ್ತರಿಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಧ್ಯೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಎಂಎನ್ ಎಸ್ ಕಾರ್ಯಕರ್ತರನ್ನು ಬಂಧಿಸಲಾಗಿತ್ತು ಎಂದು ವರದಿ ತಿಳಿಸಿದೆ.