ಬೆಂಗಳೂರು, ಮೇ 05 (DaijiworldNews/HR): ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದು, ಮೊದಲು ತಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂಬುದನ್ನು ಅರಿತು ಮಾತನಾಡಲಿ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೈದ್ದಾಂತಿಕ ವಿರೋಧ ಇರಬೇಕು. ವೈಯಕ್ತಿಕ ಧ್ವೇಷ ಒಳ್ಳೆಯದಲ್ಲ. ಚುನಾವಣೆ ಬಂದಾಗ ಕಾಂಗ್ರೆಸ್ ನಾಯಕರು ಗಿಮಿಕ್ ಮಾಡ್ತಾರೆ. ಅದು ಅವರಿಗೆ ರಕ್ತಗತವಾಗಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಪಿಎಸ್ಐ ಅಕ್ರಮ ಕಂಡು ಹಿಡಿದಿದ್ದೇ ಗೃಹ ಸಚಿವರು. ಹಾಗಾಗಿ ಗೃಹ ಸಚಿವ ಅರಗ ಜ್ಞಾನೇಂದ್ರಗೆ ಅಭಿನಂದನೆ ಸಲ್ಲಿಸಬೇಕು. ಅದನ್ನು ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.