ಬೆಂಗಳೂರು, ಮೇ 05 (DaijiworldNews/DB): ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕಾನ್ಸ್ಟೇಬಲ್ ಒಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ವಿವೇಕನಗರ ಠಾಣೆ ಕಾನ್ಸ್ ಟೇಬಲ್ ಕರಿಬಸವನಗೌಡ ಅವರನ್ನು ಅಮಾನತುಗೊಳಿಸಿ ಡಿಸಿಪಿ ಅನುಚೇತ್ ಆದೇಶ ಹೊರಡಿಸಿದ್ದಾರೆ.
ಇವರು ಅಕ್ರಮ ನಡೆದ ಪಿಎಸ್ಐ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದರು. ಅಲ್ಲದೆ, ಆಯ್ಕೆ ಪ್ರತಿ ಸಿಗುವ ಮುನ್ನವೇ ಪಿಎಸ್ಐ ಬಟ್ಟೆ ಧರಿಸಿ ಊರಿನಲ್ಲಿ ಪ್ರಚಾರ ಗಿಟ್ಟಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ನಿಯಮಾವಳಿ ಉಲ್ಲಂಘನೆ ಮಾಡಿದ ಆರೋಪದಲ್ಲಿ ಅವರನ್ನು ಅಮಾನತು ಮಾಡಲಾಗಿದೆ.