ಮೈಸೂರು, ಮೇ 06 (DaijiworldNews/MS): ಮೈಸೂರಿನ ಕೌಲಂದೆ ಗ್ರಾಮದಲ್ಲಿ ’ಮಿನಿ ಪಾಕಿಸ್ತಾನ ’ ಎಂದು ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಸಂಬಂಧ ದೊಡ್ಡಕವಲೆಂದು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೌಲಂದೆ ಗ್ರಾಮದಲ್ಲಿ ಮುಸ್ಲಿಮರು ರಂಜನ್ ಹಬ್ಬದ ನಮಾಜ್ ಮುಗಿಸಿ ಒಂದು ಕಡೆ ಸೇರಿದ್ದರು. ಈ ವೇಳೆ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದಾನೆ. ವಿಡಿಯೋ ಮಾಡುವ ವೇಳೆ ವ್ಯಕ್ತಿಯೊಬ್ಬ ಕೌಲಂದೆ ಗ್ರಾಮ ಚೋಟಾ ಪಾಕಿಸ್ತಾನ್ ಎಂದು ಹೇಳಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಮೈಸೂರು ಜಿಲ್ಲೆಯ ನಂಜನಗೂಡ ತಾಲೂಕಿನ ಕೌಲಂದೆ ಗ್ರಾಮದಲ್ಲಿ ಛೋಟಾ ಪಾಕಿಸ್ತಾನ ಎಂದು ಘೋಷಣೆ ಕೂಗಿದ ವಿಡಿಯೋ ಭಾರೀ ವಿವಾದಕ್ಕೂ ಕಾರಣದ ಹಿನ್ನಲೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದ್ದು ಈ ಹಿನ್ನಲೆಯಲ್ಲಿ ದೊಡ್ಡ ಕವಲೆಂದು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.