ಬೆಳಗಾವಿ, ಮೇ 06 (DaijiworldNews/DB): ಕರ್ನಾಟಕದ ಐದು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ ಗ್ರಾಫಿಕ್ ವೀಡಿಯೋ ಮತ್ತು ಫೋಟೋಗಳನ್ನು ತನ್ನ ಫೇಸ್ಬುಕ್ ಪೇಜ್ನಲ್ಲಿ ಪೋಸ್ಟ್ ಮಾಡಿದ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ದ ಎಫ್ಐಆರ್ ದಾಖಲಾಗಿದೆ.
ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರವನ್ನು ಬೆಳಗಾವಿಗೆ ಸೇರಿಸಿದ ರೀತಿಯಲ್ಲಿ ಈ ಗ್ರಾಫಿಕ್ಸ್ ಇದೆ. ಇದನ್ನು ಶುಭಂ ಕೆಳಕೆ ಪೋಸ್ಟ್ ಮಾಡಿದ್ದು, ಪೋಸ್ಟ್ನಲ್ಲಿ ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ. ಈ ಪೋಸ್ಟ್ ವಿರುದ್ದ ಕರವೇ ಕಾರ್ಯಕರ್ತ ವಿನಾಯಕ ಬೋವಿ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಪೊಲೀಸರು ಶುಭಂ ವಿರುದ್ದ ಎಫ್ಐಆರ್ ದಾಖಲಿಸಿಕೊಂಡು ಠಾಣೆಗೆ ಕರೆಸಿ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚಿಸಿದ್ದಾರೆ. ಆದರೆ, ಈವರೆಗೆ ಶುಭಂ ಪೋಸ್ಟ್ ಡಿಲೀಟ್ ಮಾಡದೇ ಉದ್ದಟತನ ತೋರಿದ್ದಾರೆ ಎಂದು ವರದಿಗಳು ತಿಳಿಸಿವೆ.
ಐಟಿ ಆಕ್ಟ್ 2000(U/s-66), ಐಪಿಸಿ ಸೆಕ್ಷನ್ 1860(U/s-153B) ಅಡಿಯಲ್ಲಿ ಶುಭಂ ವಿರುದ್ದ ಪ್ರಕರಣ ದಾಖಲಿಸಲಾಗಿದೆ.