ಬೆಂಗಳೂರು, ಮೇ 06 (DaijiworldNews/SM): 2023ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಬಲವರ್ದನೆ ಕಾರ್ಯ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರ ಪಕ್ಷದ ಹಲವು ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಳಿವುಕೊಟ್ಟಿದ್ದಾರೆ.
ದಕ್ಷಿಣ ಕರ್ನಾಟಕದತ್ತ ಹೆಚ್ಚಿನ ಗಮನಹರಿಸಲಾಗುವುದು. ಅಲ್ಲಿ ಪಕ್ಷ ಬಲವಂತಪಡಿಸಲು ಬಿಜೆಪಿ ಕ್ರಮ ಕೈಗೊಳ್ಳಲಿದೆ ಎಂದರು. ಇತರ ಪಕ್ಷಗಳ ನಾಯಕರು ಶೀಘ್ರದಲ್ಲೇ ಕೇಸರಿ ಪಕ್ಷ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವುಕೊಟ್ಟಿದ್ದಾರೆ.
ಹಳೆ ಮೈಸೂರು ಅಥವಾ ದಕ್ಷಿಣ ಕರ್ನಾಟಕದ ಬೆಲ್ಟ್ಗೆ ಒಳಪಡುವ ಮಂಡ್ಯದಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಸಭೆ ನಡೆಸುವ ಬಗ್ಗೆ ಪಕ್ಷ ಚರ್ಚೆ ನಡೆಸುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.