ಬಳ್ಳಾರಿ, ಮೇ 07 (DaijiworldNews/HR): ನಗರದ ವಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದ ಕೋಣೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯನ್ನು ಶ್ರೇಯಸ್ ಜೋಶಿ (25) ಎಂದು ಗುರುತಿಸಲಾಗಿದೆ.
ಮೂಲತಃ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕು ರಾಜೇಶ್ವರ ಗ್ರಾಮದವರಾಗಿದ್ದ ಶ್ರೇಯಸ್ ಜೋಶಿ, ಇತ್ತೀಚೆಗೆ ಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆಯನ್ನು ಬರೆದು ಉತ್ತೀರ್ಣನಾಗಿದ್ದನು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಬೈಪೋಲಾರ್ ಡಿಸಾರ್ಡರ್ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಕುರಿತು ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821