ನವದೆಹಲಿ, ಮೇ 08 (DaijiworldNews/HR): ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೈಬಾದ (ಎಲ್ಇಟಿ) ಪಾಕಿಸ್ತಾನಿ ಭಯೋತ್ಪಾದಕ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಚೆಯಾನ್ ದೇವ್ಸರ್ ಪ್ರದೇಶದಲ್ಲಿ ಭಾರತೀಯ ಸೇನೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇನ್ನು ಈ ಹಿಂದೆ ಕಾಶ್ಮೀರದ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ವಿಜಯ್ ಕುಮಾರ್, ಸಿಕ್ಕಿಬಿದ್ದ ಉಗ್ರರಲ್ಲಿ ಒಬ್ಬ ಪಾಕಿಸ್ತಾನಿ ಎಂದು ಹೇಳಿದ್ದರು. ಎಲ್ಇಟಿ ಭಯೋತ್ಪಾದಕ ಸಂಘಟನೆಯ ಪಾಕಿಸ್ತಾನಿ ಭಯೋತ್ಪಾದಕ (ಹೈದರ್) ಮತ್ತು ಸ್ಥಳೀಯ ಭಯೋತ್ಪಾದಕ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿಸಿದ್ದಾರೆ.