ಬೆಂಗಳೂರು, ಮೇ 08 (DaijiworldNews/SM): ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಡಳಿತ ಶೈಲಿ ಬದಲಾಯಿಸಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಕ್ರಮ ವಹಿಸಬೇಕೆಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.
ರಾಜ್ಯ ಸರಕಾರದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕ್ರಮಕೈಗೊಳ್ಳಬೇಕು. ರಾಜ್ಯದ ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದರು.
ಬಡವರಿಗೆ ಸಹಾಯ ಮಾಡಲು ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿದರೆ ಹೊಸ ಚೈತನ್ಯ ಮೂಡುತ್ತದೆ. ಅದರಿಂದ ನಿಮಗೂ ತೃಪ್ತಿ ದೊರೆಯುವುದು ಎಂದರು.