ಬೆಂಗಳೂರು, ಮೇ 09 (DaijiworldNews/MS): ರಾಜ್ಯ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಭೋದನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.
ಪ್ರಸ್ತಕ ವರ್ಷದಿಂದ ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಜೊತೆಗೆ ರಾಮಾಯಣ, ಮಹಾಭಾರತ ಬೋಧನೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಆದರೆ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಕಿಡಿಕಾರಿದ್ದು, ಎಲ್ಲರಿಗೂ ಕಡ್ಡಾಯ ಭಗವದ್ಗೀತೆ ಕಲಿಕೆಗೆ ಒತ್ತಾಯಿಸಬಾರದು ಎಂದು ಆಕ್ರೋಶ ಹೊರಹಾಕಿದೆ.
ಭಗವದ್ಗೀತೆಯ ಜೊತೆಗೆ ಬೈಬಲ್, ಕುರಾನ್ ಗೂ ಅವಕಾಶ ಯಾಕಿಲ್ಲ? ಕುರಾನ್, ಬೈಬಲ್ ಗೆ ಅವಕಶ ನೀಡಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.
ಗುಜರಾತ್ ಮಾದರಿಯಲ್ಲಿ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ಈಗಾಗಲೇ ನಿರ್ಧಾರ ಮಾಡಿದ್ದು, ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.