ಕಲಬುರಗಿ, ಮೇ 09 (DaijiworldNews/HR): ಆಜಾನ್ ವಿರುದ್ಧ ಶ್ರೀರಾಮ ಸೇನೆ ಕರೆ ನೀಡಿದ ಸುಪ್ರಭಾತ ಅಭಿಯಾನಕ್ಕೆ ವಿರೋಧ ವ್ಯಕ್ತವಾಗಿದ್ದು, ಹನುಮಾನ್ ಚಾಲೀಸಾ ಪಠಣ ಮಾಡುತ್ತಾ ತೆರಳುತ್ತಿರುವ ಶ್ರೀರಾಮ ಸೇನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಪ್ರಭಾತ ಹಾಕಿದ ಶ್ರೀರಾಮ ಸೇನೆ ಕಾರ್ಯಕರ್ತರು, ಮಧ್ಯಾಹ್ನ ಹನುಮಾನ್ ಚಾಲೀಸಾ ಪಠಣಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಜಗತ್ ವೃತ್ತದಿಂದ ಸೂಪರ್ ಮಾರ್ಕೆಟ್ವರೆಗೆ ಪಾದಯಾತ್ರೆ ಮೂಲಕ ತೆರಳಿ ಅಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಪಠಣಕ್ಕೆ ಮುಂದಾಗಿದ್ದರು.
ಇನ್ನು ಮುಸ್ಲಿಂ ಸಮುದಾಯಕ್ಕೆ ದಲಿತ ಸಂಘಟನೆಗಳು, ಜೆಡಿಎಸ್ ಕಾರ್ಯಕರ್ತರು ಬೆನ್ನೆಲುಬಾಗಿ ನಿಂತಿದ್ದು, ಹನುಮಾನ್ ಚಾಲೀಸಾ ಪಠಣ ಮಾಡುತ್ತಾ ಹೊರಟ 20ಕ್ಕೂ ಅಧಿಕ ಜನ ಶ್ರೀರಾಮ ಸೇನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.