ಶಿವಮೊಗ್ಗ, ಮೇ 09 (DaijiworldNews/SM): ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶವಿದೆ. ಅದರಂಟೆ ರಾಜ್ಯ ಸರಕಾರ ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಈ ಹಿಂದಿನ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬದ್ಧವಾಗಿದೆ. ಈ ಕುರಿತಂತೆ ಇನ್ನೆರಡು ದಿನಗಳಲ್ಲಿ ಸಮರ್ಪಕ ನಿರ್ಧಾರ ಪ್ರಕಟಿಸಲಾಗುವುದೆಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕವಾಗಿ ಧ್ವನಿವರ್ಧಕ ಉಪಯೋಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶವಿದೆ. ಅದರಲ್ಲಿ ಯಾವ ರೀತಿ ಬಳಸಬೇಕೆನ್ನುವ ಬಗ್ಗೆ ಉಲ್ಲೇಖವಿದೆ. ಅದರಂತೆ ನಿಯಮ ಪಾಲಿಸಿಕೊಂಡು ಧ್ವನಿವರ್ಧಕ ಬಳಸಬೇಕು. ಸರಕಾರ ಸುಪ್ರೀಂ ಆದೇಶ ಜಾರಿಗೆ ತರಲು ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.