ಮೊಹಾಲಿ, ಮೇ 10 (DaijiworldNews/HR): ಪಂಜಾಬ್ ಗುಪ್ತಚರ ದಳದ ಪ್ರಧಾನ ಕಚೇರಿ ಮೇಲೆ ಸೋಮವಾರ ರಾತ್ರಿ ಗ್ರೆನೇಡ್ ದಾಳಿ ನಡೆದಿದ್ದು, ದಾಳಿ ಪ್ರಕರಣದ ಹಿಂದೆ ಉಗ್ರರ ಕೈವಾಡ ಇರುವ ಶಂಕೆಗಳನ್ನು ಪಂಜಾಬ್ ಪೊಲೀಸರು ನಿರಾಕರಿಸಿದ್ದಾರೆ.
ಗುಪ್ತಚರ ದಳದ ಪ್ರಧಾನ ಕಚೇರಿ ಮೇಲೆ ರಾಕೆಟ್ ಲಾಂಚರ್ನಿಂದ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ, ಗಾಯಗಳು ಸಂಭವಿಸಿಲ್ಲ. ಆದರೆ ಕಟ್ಟದ ಗಾಜುಗಳು ಒಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮೊದಲಿಗೆ ಇದೊಂದು ಭಯೋತ್ಪಾದಕ ದಾಳಿ ಎಂದೇ ಹೇಳಲಾಗಿದ್ದು, ಮೊಹಾಲಿ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಭಯೋತ್ಪಾದಕರ ಕೃತ್ಯ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮೊಹಾಲಿ ಎಸ್ಪಿ ರವೀಂದರ್ ಪಾಲ್ ಸಿಂಗ್ ಮಾತನಾಡಿ, ಉಗ್ರರ ಕೃತ್ಯ ಶಂಕೆಯನ್ನು ನಿರಾಕರಿಸುವಂತಿಲ್ಲ. ಎಲ್ಲಾ ರೀತಿಯಲ್ಲೂ ತನಿಖೆ ಆರಂಭವಾದಿದೆ. ಇದು ಸಣ್ಣ ಪ್ರಮಾಣದ ಸ್ಫೋಟವಾಗಿದ್ದು, ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಹೇಳಿದ್ದಾರೆ.