ಬೆಂಗಳೂರು, ಮೇ 10 (DaijiworldNews/HR): ಕೆಲವರು ಜೆಡಿಎಸ್ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದು, ಡ್ಯಾಮೇಜ್ ಮಾಡಲು ಹೋದರೆ ಅವರೇ ಬೀದಿಪಾಲಾಗುತ್ತಾರೆ. ಅದಕ್ಕೆ ಸಾಕಷ್ಟು ಉದಾಹರಣೆಗಳಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿ.ಎಲ್ ಶಂಕರ್ ಕಾಂಗ್ರೆಸ್ ಗೆ ಹೋಗಿ ಏನಾದ್ರು? ಇಪ್ಪತ್ತು ವರ್ಷವಾಯ್ತು ಅಲ್ಲಿ ಏನಾಗಿದ್ದಾರೆ? ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ. ಪಕ್ಷವೇ ಹೊಸ ನಾಯಕತ್ವವನ್ನ ಹುಟ್ಟು ಹಾಕಲಿದೆ ಎಂದರು.
ಹಣ ಇದ್ದವರಿಗೆ ಮಣೆ ಹಾಕಲಾಗುತ್ತಿದೆ ಎಂಬ ಮರಿತಿಬ್ಬೇಗೌಡ ಆರೊಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮರಿತಿಬ್ಬೇಗೌಡ ಮಾತನ್ನಾಡಿರೋದನ್ನ ಗಮನಿಸಿದ್ದೇನೆ. ನಮ್ಮಪಕ್ಷಕ್ಕೆ ಅವರು ಎಷ್ಟು ಹಣ ಸಂದಾಯ ಮಾಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದಾಗ ಎಷ್ಟು ನೀಡಿದ್ದಾರೆ. ಯಾವ ನಾಯಕರಿಗೆ ಹಣ ಸಂದಾಯ ಮಾಡಿದ್ದರು? ಎಂದು ಪ್ರಶ್ನಿಸಿದ್ದಾರೆ.
ಇನ್ನು ಮರಿತಿಬ್ಬೇಗೌಡ ಅವರ ಈ ರೀತಿಯ ಕ್ಷುಲ್ಲಕವಾದ ಹೇಳಿಕೆಗಳನ್ನು ನೀಡುತ್ತಿದ್ದು, ಈ ಬಗ್ಗೆ ಜನರೇ ತೀರ್ಮಾನಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.