ವಿಶಾಖಪಟ್ಟಣಂ, ಮೇ 10 (DaijiworldNews/MS): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸನಿ ಚಂಡಮಾರುತದ ಪರಿಣಾಮ ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಗಾಳಿ- ಮಳೆಯಾಗಲಿದ್ದು ಮುಂಜಾಗ್ರತ ಕ್ರಮವಾಗಿ ವೈಜಾಗ್ ಏರ್ಫೋರ್ಟ್ನಲ್ಲಿರುವ ಎಲ್ಲಾ ʻವಿಮಾನಗಳ ಹಾರಾಟ ರದ್ದುʼಗೊಳಿಸಲಾಗಿದೆ.
ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಗೆ ಸಮೀಪಿಸುತ್ತಿದ್ದು ಭಾರೀ ಮಳೆ ಮತ್ತು ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನಲೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.
ತೀವ್ರ ಚಂಡಮಾರುತದ ಪ್ರಭಾವದ ಅಡಿಯಲ್ಲಿ ವಿಶಾಖಪಟ್ಟಣಂನಲ್ಲಿ ಕೆಟ್ಟ ಹವಾಮಾನವು ಸೋಮವಾರ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.
ಹವಾಮಾನ ವೈಪರೀತ್ಯದಿಂದಾಗಿ ಕರ್ನೂಲ್, ಬೆಂಗಳೂರು ಮತ್ತು ಹೈದರಾಬಾದ್ನಿಂದ ಬಂದ ವಿಮಾನಗಳನ್ನು ವಿಶಾಖಪಟ್ಟಣಂ ವಿಮಾನ ನಿಲ್ದಾಣದಲ್ಲಿ ಇಳಿಸಲು ಸಾಧ್ಯವಾಗದೆ ವಾಪಸ್ ಕಳುಹಿಸಬೇಕಾಯಿತು.ಹೈದರಾಬಾದ್, ಮುಂಬೈ, ಚೆನ್ನೈ ಮತ್ತು ವಿಜಯವಾಡದಿಂದ ವಿವಿಧ ವಿಮಾನಯಾನ ಸಂಸ್ಥೆಗಳ ವಿಮಾನಗಳನ್ನು ಸಹ ರದ್ದುಗೊಳಿಸಲಾಗಿದೆ.
ಇನ್ನೊಂದೆಡೆ ಬಂಗಾಳಕೊಲ್ಲಿಯಲ್ಲಿ ತೀವ್ರ ಚಂಡಮಾರುತ ಅಸಾನಿ' ಕರಾವಳಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಕರಾವಳಿಯಲ್ಲಿ ಮಂಗಳವಾರ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು ಸನ್ನದ್ಧವಾಗಿವೆ.