ಬೆಂಗಳೂರು, ಮೇ 10 (DaijiworldNews/SM): ಬಿಜೆಪಿ ಸರ್ಕಾರ ಹಗರಣಗಳಲ್ಲಿ ಮುಳುಗಿದೆ. ನೇಮಕಾತಿಗಳಲ್ಲಿ ದೊಡ್ಡ ಹಗರಣ ಮಾಡುತ್ತಿದೆ. ಇದು ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆಘಾತ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಅವರು ನಕಲಿ ಸರ್ಟಿಫಿಕೇಟ್ ಕೊಟ್ಟಿರುವ ವಿಚಾರವಾಗಿ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಈ ಎಲ್ಲ ಅಕ್ರಮಗಳನ್ನು ಸರ್ಕಾರ ಬಹಳ ಗೌಪ್ಯವಾಗಿ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ ಗುಡುಗಿದ್ದಾರೆ.
ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರು ಯಾವುದೇ ತಪ್ಪು ಮಾಡಿಲ್ಲ, ಎಂದು ಈಗಾಗಲೇ ನಿರ್ದೋಷಿ ಎಂದು ಬಿಜೆಪಿ ಪಕ್ಷ ಹಾಗೂ ಸಿಎಂ ಪ್ರಮಾಣ ಪತ್ರ ನೀಡಿದ್ದಾರೆ. ಮಧ್ಯವರ್ತಿಗಳಾ ವಿರುದ್ಧ ಕ್ರಮ ಕೈಗೊಂಡು ಅಕ್ರಮಗಳನ್ನು ಮುಚ್ಚಿಹಾಕುವ ಯತ್ನ ಬಿಜೆಪಿ ಮಾಡುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.