ನವದೆಹಲಿ, ಮೇ 10 (DaijiworldNews/SM): ಬಿಜೆಪಿ ಎಲ್ಲಾ ಚುನಾವಣೆಗಳಿಗೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರತಿ ನಮಗೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯ ಚುನಾವಣಾ ಆಯೋಗ ಏನು ತೀರ್ಮಾನ ಮಾಡುತ್ತದೋ ಅದನ್ನು ಪಾಲಿಸಲಾಗುವುದು ಕರ್ತವ್ಯವಾಗಿದ್ದು, ಅದನ್ನು ನಾವು ಪಾಲಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. ಇನ್ನು ಚುನಾವಣಾ ಆಯೋಗದೊಂದಿಗೆ ಚರ್ಚಿಸಿ ಅವರು ಸೂಚಿಸಿದಂತೆ ಕ್ರಮ ವಹಿಸಲಾಗುವುದು ಎಂದರು.
ಬಿಬಿಪಿಎಂ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಬಿಜೆಪಿ ಸಿದ್ದವಿದೆಯೇ ಎಂದು ಕಾಂಗ್ರೆಸ್ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ""ಕಾಂಗ್ರೆಸ್ ಪಕ್ಷ ಸದ್ಯ ಮುಳುಗುವ ದೋಣಿ. ಮೊದಲು ಅವರದ್ದನ್ನು ಅವರು ನೋಡಿಕೊಳ್ಳಬೇಕು. ಸಭೆಗಳಲ್ಲಿ ಬಡಿದಾಡಿಕೊಂಡು ಬಂದಿದ್ದಾರೆ. ನಾವು ಇಡೀ ರಾಜ್ಯ ಸುತ್ತಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ಮಾಡಿದ್ದೇವೆ. ಬಿಬಿಎಂಪಿಯಲ್ಲಿಯೂ ಸಭೆಗಳನ್ನು ಮಾಡಿದ್ದೇವೆ. ಎಲ್ಲಾ ಚುನಾವಣೆಗಳನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.