ಬೆಂಗಳೂರು, ಮೇ 11 (DaijiworldNews/SM) : ಶಿವಮೊಗ್ಗದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಹತ್ತು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90 ರಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂಬ ರಾಷ್ಟ್ರೀಯ ತನಿಖಾ ದಳ ( ಎನ್ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಬುಧವಾರ ಎನ್ಐಎ ವಿಶೇಷ ನ್ಯಾಯಾಲ ಯದಲ್ಲಿ ನಡೆದ ವಿಚಾರಣೆ ಸಂದರ್ಭ, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-1967ರ ಕಲಂ 43ಡಿ (2)(ಬಿ) ಅಡಿಯಲ್ಲಿ 190 ದಿನಗಳಿಗೆ ವಿಸ್ತರಿಸಲು ವಿಚಾರಣೆ ವೇಳೆ ಎನ್ಐಎ ಪರ ವಕೀಲರು ಕೋರಿದರು. ಅದನ್ನು ನ್ಯಾಯಾಧೀಶರು ಮಾನ್ಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ.