ಬೆಂಗಳೂರು, ಮೇ 12 (DaijiworldNews/HR): ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿರುವ ಆರೋಪಿ ನಾಗೇಶ ಪೊಲೀಸರಿಗೆ ಇನ್ನೂ ಸಿಗದೇ ತಲೆಮರೆಸಿಕೊಂಡಿದ್ದಾನೆ.
ಏಪ್ರಿಲ್ 28 ರಂದು ಬೆಂಗಳೂರಿನ ಸುಂಕದಕಟ್ಟೆಯ ಮುತ್ತೂಟ್ ಮಿನಿ ಫೈನಾನ್ಸ್ ಕಚೇರಿ ಎದುರು ಯುವತಿಯೊಬ್ಬಳ ಮೇಲೆ ಆಸಿಡ್ ಎರಚಿ ನಾಗೇಶ ಪರಾರಿಯಾಗಿದ್ದು,ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಪೊಲೀಸರು ಆಸಿಡ್ ನಾಗನ ಪತ್ತೆಗಾಗಿ ಹರಸಾಹಸ ಪಡ್ತಿದ್ದು, ರಾಜ್ಯ ಹೊರ ರಾಜ್ಯಗಳಲ್ಲಿ ತೀವ್ರ ಹುಡುಕಾಟ ನಡೆಸ್ತಿದ್ದು, ಇದುವರೆಗೂ ಸುಮಾರು 15 ಸಾವಿರಕ್ಕೂ ಹೆಚ್ಚು ಲಾಡ್ಜ್ನಲ್ಲಿ ಹುಡುಕಾಡಿದ್ದಾರೆ ಎನ್ನಲಾಗಿದೆ.
ಇನ್ನು ಆಸಿಡ್ ದಾಳಿಯಲ್ಲಿ ಗಾಯಗೊಂಡಿರುವ ಯುವತಿಗೆ ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ನಾಗನ ಹುಡುಕಾಟವನ್ನು ಕೂಡ ಪೊಲೀಸರು ಹೆಚ್ಚಿಸಿದ್ದಾರೆ.