ಲಖನೌ, ಮೇ 12 (DaijiworldNews/DB): ನಿರ್ಲಕ್ಷ್ಯ ಮತ್ತು ಅಸಮರ್ಥ ಅಧಿಕಾರಿ ಎಂದು ಆಪಾದಿಸಿ ಉತ್ತರ ಪ್ರದೇಶದ ಡಿಜಿಪಿ ಮುಕುಲ್ ಗೋಯೆಲ್ ಅವರನ್ನು ಉತ್ತರ ಪ್ರದೇಶ ಸರ್ಕಾರವು ಹುದ್ದೆಯಿಂದ ವಜಾಗೊಳಿಸಿದೆ.
ಗೋಯೆಲ್ ವಜಾದಿಂದ ತೆರವಾಗಿರುವ ಡಿಜಿಪಿ ಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರನ್ನು ನಿಯುಕ್ತಿಗೊಳಿಸಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಗೋಯೆಲ್ ಅವರನ್ನು ನಾಗರಿಕ ರಕ್ಷಣಾ ಇಲಾಖೆಯ ಮಹಾನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಮಾಹಿತಿ) ನವನೀತ್ ಸೆಹಗಲ್ ಸುದ್ದಿಸಂಸ್ಥಯೊಂದಕ್ಕೆ ತಿಳಿಸಿದ್ದಾರೆ.
ಕರ್ತವ್ಯದಲ್ಲಿ ನಿರ್ಲಕ್ಷ್ಯ, ಇಲಾಖೆಯ ಕೆಲಸಗಳಲ್ಲಿ ಅನಾಸಕ್ತಿ ಮತ್ತು ಅದಕ್ಷ ನಡವಳಿಕೆ ಕಾರಣಕ್ಕಾಗಿ ಗೋಯೆಲ್ ಅವರನ್ನು ಡಿಜಿಪಿ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಕಳೆದ ವರ್ಷ ಜೂನ್ನಲ್ಲಿಅವರನ್ನು ಡಿಜಿಪಿಯಾಗಿ ನಿಯೋಜಿಸಲಾಗಿತ್ತು. ಅದಕ್ಕೂ ಮುನ್ನ ಗಡಿ ಭದ್ರತಾ ಪಡೆಯ ಹೆಚ್ಚುವರಿ ಮಹಾನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.