ನವದೆಹಲಿ, ಮೇ 12 (DaijiworldNews/HR): ಭಾರತದ ನೂತನ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅವರನ್ನು ನೇಮಕಗೊಳಿಸಲಾಗಿದ್ದು, ಮೇ 15ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಪ್ರಸ್ತುತ ಹಾಲಿ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮೇ 14 ರಂದು ನಿವೃತ್ತಿ ಹೊಂದಲಿದ್ದು, ರಾಜೀವ್ ಕುಮಾರ್ ಅವರು ಮೇ 15ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಈ ಕುರಿತು ಕಿರಣ್ ರಿಜಿಜು ಟ್ವೀಟ್ ಮಾಡಿ ಮ್ಹಿತಿ ನೀಡಿದ್ದು, ಸಂವಿಧಾನದ 324 ನೇ ವಿಧಿಯ ಷರತ್ತು (2) ರ ಅನುಸಾರವಾಗಿ, 2022ರ ಮೇ 15 ರಿಂದ ಜಾರಿಗೆ ಬರುವಂತೆ ರಾಜೀವ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ. ರಾಜೀವ್ ಅವರಿಗೆ ನನ್ನ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.