ರಾಂಚಿ, ಮೇ 12 (DaijiworldNews/MS): ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣ ಸಂಬಂಧ ಜಾರ್ಖಂಡ್ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್ ಅವರನ್ನು ಜಾರ್ಖಂಡ್ ಸರ್ಕಾರ ಗುರುವಾರ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.
ಜಾರಿ ನಿರ್ದೇಶನಾಲಯ (ಇ.ಡಿ) ಸತತ ಎರಡು ದಿನಗಳ ವಿಚಾರಣೆ ನಂತರ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಪಿಎಂಎಲ್ಎ ಸೆಕ್ಷನ್ ಅಡಿಯಲ್ಲಿ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಪಡೆದಿದೆ.
"ರಾಜ್ಯ ಸರ್ಕಾರವು ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ ನಿಯಮಗಳು, 1969)ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪೂಜಾ ಸಿಂಘಾಲ್ ಅವರನ್ನು ಅಮಾನತುಗೊಳಿಸಿದೆ" ಎಂದು ತಿಳಿದುಬಂದಿದೆ
2000ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಸಿಂಘಾಲ್ ಅವರು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಅನುದಾನ ದುರುಪಯೋಗ ಮಾಡಿಕೊಂಡಿರುವ ಆರೋಪ ಇದೆ.