ಬೆಂಗಳೂರು,ಮೇ 13 (DaijiworldNews/MS): ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಕಾಳಿ ಸ್ವಾಮಿ ಎಂದೇ ಗುರುತಿಸಿಕೊಳ್ಳುವ ಋಷಿ ಕುಮಾರ ಸ್ವಾಮೀಜಿಯ ಮೇಲೆ ಕ್ಷುಲಕ ಕಾರಣಕ್ಕೆ ದಾಳಿ ನಡೆಸಿದ ಕಕನ್ನಡ ಸಂಘಟನೆ ಕಾರ್ಯಕರ್ತರು ಮುಖಕ್ಕೆ ಮಸಿ ಬಳಿದು ವಿಕೃತಿ ಮೆರೆದಿದ್ದಾರೆ.
ಗುರುವಾರದಂದು ಋಷಿಕುಮಾರ ಸ್ವಾಮಿ, ಬೆಂಗಳೂರಿನ ಮಲ್ಲೇಶ್ವರದ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಗಳ ಹಲವು ಕಾರ್ಯಕರ್ತರು, ನೀವು ನಾಡಪ್ರಭು ಕೆಂಪೇಗೌಡ ಹಾಗೂ ಕುವೆಂಪು ವಿರುದ್ಧ ಹೇಳಿಕೆ ನೀಡಿದ್ದೀರಿ ಎಂದು ಆರೋಪಿಸಿ ಋಷಿಕುಮಾರ ಸ್ವಾಮಿ ಮುಖಕ್ಕೆ ಮಸಿ ಬಳಿದಿದ್ದಾರೆ.
ಕಾಳಿ ಮಠದ ಋಷಿಕುಮಾರ ಸ್ವಾಮಿ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಆಡಿದ ಮಾತುಗಳು ಕನ್ನಡ ಪರ ಸಂಘಟನೆಯ ಕಾರ್ಯಕರ್ತರನ್ನು ಕೆರಳಿಸಿತ್ತು ಎನ್ನಲಾಗಿದೆ.
ತಾವು ಕುವೆಂಪು ಮತ್ತು ನಾಡಪ್ರಭು ಕೆಂಪೇಗೌಡರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿಲ್ಲ. ತಾಕತ್ ಇದ್ದರೇ ತನ್ನ ಮೇಲೆ ಮಾಡಿರುವ ಆರೋಪವನ್ನು ನ್ಯಾಯಾಲಯದಲ್ಲಿ ಸಾಬೀತು ಪಡಿಸಲಿ . ಇದಕ್ಕೆಲ್ಲಾ ಹೆದರುವವನು ನಾನಲ್ಲ ಎಂದು ಇದೇ ವೇಳೆ ಋಷಿಕುಮಾರ ಸ್ವಾಮಿ ಸವಾಲ್ ಹಾಕಿದ್ದಾರೆ.