ನವದೆಹಲಿ, ಮೇ 13 (DaijiworldNews/HR): ಸ್ನಾತಕೋತ್ತರ ಪರೀಕ್ಷೆಗಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ.
ನೀಟ್ ಪಿಜಿ ಸಿಇಟಿ ಪರೀಕ್ಷೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿಯ ವಿಚಾರಣೆ ಇಂದು ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.
ಇನ್ನು ಇದರಿಂದಾಗಿ ನೀಟ್ - ಪಿಜಿ ಪರೀಕ್ಷೆಗಳು ನಿಗದಿಯಂತೆ ನಡೆಯುವುದು ಖಚಿತವಾಗಿದೆ.