ಬೆಂಗಳೂರು, ಮೇ 14 (DaijiworldNews/DB): ಸಚಿವ ಸಂಪುಟ ವಿಸ್ತರಣೆ ಅಥವಾ ಬದಲಾವಣೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಸಿಎಂ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅವರ ನಿರ್ಧಾರವೇ ಅಂತಿಮ ಎಂದರು.
ಬಿಜೆಪಿಯಲ್ಲಿ ಆಂತರಿಕ ಗೊಂದಲ ಅಸಮಾಧಾನಗಳು ಇಲ್ಲ. ಎಲ್ಲರೂ ಚುನಾವಣೆ ಎದುರಿಸಲು ಸಿದ್ದರಾಗಿದ್ದಾರೆ ಎಂದು ಅವರು ತಿಳಿಸಿದರು.