ಕೇರಳ, ಮೇ 14 (DaijiworldNews/DB): ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಕೇರಳ ನಟ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಜಾರಿ ನಿರ್ದೇಶನಾಲಯವು ಶನಿವಾರ ಸಮನ್ಸ್ ನೀಡಿದೆ.
ನಕಲಿ ಪುರಾತನ ವಸ್ತುಗಳ ವ್ಯಾಪಾರಿ ಮತ್ತು ವಂಚಕ ಮಾನ್ಸನ್ ಮಾವುಂಕಲ್ ವಿರುದ್ಧ ಪ್ರಕರಣವೊಂದು ದಾಖಲಾಗಿದ್ದು, ಈ ಸಂಬಂಧ ಅವರಿಗೆ ಸಮನ್ಸ್ ನೀಡಲಾಗಿದೆ.
10 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಮುಂದಿನ ವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.