ಮೈಸೂರು, ಮೇ 15 (DaijiworldNews/DB): ಜೆಡಿಎಸ್ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರ ಮೊಮ್ಮಗಳು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಿ.ಟಿ. ದೇವೇಗೌಡ ಅವರ ಪುತ್ರ ಜಿ.ಡಿ. ಹರೀಶ್ ಗೌಡ ಅವರ ಮಗಳು ಗೌರಿ (3 ವರ್ಷ) ಮೃತಪಟ್ಟ ಮಗು.
ಗೌರಿ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದಾಳೆ. ಪುಟ್ಟ ಕಂದಮ್ಮನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.