ಹುಬ್ಬಳ್ಳಿ, ಮೇ 15 (DaijiworldNews/HR): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ನಾಳೆ ಅಥವಾ ನಾಡಿದ್ದು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್, ರಾಜ್ಯಸಭಾ ಚುನಾವಣೆಯ ಸಿದ್ಧತೆಯಲ್ಲಿದ್ದು, ನಾಳೆ ಅಥವಾ ನಾಡಿದ್ದು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸುತ್ತೇವೆ ಎಂದರು.
ಇನ್ನು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.